ಕರ್ನಾಟಕ
ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಕರ್ನಾಟಕವು ಅತಿ ದೊಡ್ಡ ರಾಜ್ಯ ಹಾಗೂ ದೇಶದ ಆರನೇ ದೊಡ್ಡ ರಾಜ್ಯ. ೧೯೭೩ ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.[೩] ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ). ೧೯೫೬ ರಲ್ಲಿ ಸುತ್ತ-ಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು. "ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ ಕಪ್ಪು ಮಣ್ಣಿನ ನಾಡು, "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.[೪]
ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ. ೨೦೦೧ ರ ಜನಗಣತಿಯಂತೆ, ೫ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಹತ್ತು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು.
- ಕರ್ನಾಟಕದ ರಾಜಧಾನಿಯಾದ ಬೆಂಗಳೂರು[೫] ಮಾತ್ರ 1.30 ಕೋಟಿಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ನಗರ. ಇತರ ಪ್ರಮುಖ ನಗರಗಳೆಂದರೆ ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ಬಳ್ಳಾರಿ, ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ[೬]. ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ.
- ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ.ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು (ಹಿಂದಿ ಭಾಷೆಯಲ್ಲಿ ಬಿಟ್ಟು) ಜ್ಞಾನಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ.[೭]
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ